ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಶ್ರೀಗಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಎರಡನೇ ದೂರಿನ ತನಿಖೆ ನಡೆಸಿದ ಚಿತ್ರದುರ್ಗ ಪೊಲೀಸರು ಮುರುಘಾ ಶ್ರೀ ಸೇರಿದಂತೆ ಐವರ ವಿರುದ್ಧ ಸುಧೀರ್ಘ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲನೇ ಪ್ರಕರಣದ ಬಳಿಕ ಇಬ್ಬರು ಬಾಲಕಿಯರ ಆರೋಪದ ಹಿನ್ನೆಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಲಾಗಿತ್ತು.
ಸ್ನಾನ ಗೃಹಕ್ಕೆ ಕರೆದು ಅತ್ಯಾಚಾರ ಮಾಡುತ್ತಾ ಇದ್ದರು. ಖಾಸಗಿ ಕೊಠಡಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಲಾಗ್ತಾ ಇತ್ತು ಎಂದು ಆರೋಪಿಸಿದ್ದ ಸಂತ್ರಸ್ತೆಯರು ಪ್ರಕರಣಕ್ಕೆ ಪೂರಕ ಸಾಕ್ಷ್ಯ ಒದಗಿಸಿದ್ರು. ಈ ಪ್ರಕರಣದ ತನಿಖೆ ನಡೆಸಿದ್ದ ಚಿತ್ರದುರ್ಗ ಪೊಲೀಸರು ಈಗ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ಚಿತ್ರದುರ್ಗದ 2 ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.










