ಮುಳಬಾಗಿಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವಿರುದ್ಧ ಎಫ್ಐಆರ್ ದಾಖಲು…

118
firstsuddi

ಕೋಲಾರ: ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮುಳಬಾಗಿಲು ತಾಲೂಕಿನ ಯಲವಳ್ಳಿ ಗ್ರಾಮದ ಸರ್ವೆ ನಂ.65ರಲ್ಲಿ 2 ಎಕರೆ 10 ಗುಂಟೆ ಜಮೀನು ಲಪಟಾಯಿಸಲು ಮುಂದಾಗಿದ್ದ ಆಂಜನೇಯಲು ವಿರುದ್ಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಅಂಜು ಬಾಸ್ ಚಂಗಮ್ಮ ಎಂಬ ಮಹಿಳೆಯ ಬಳಿ ಒಂದು ಎಕರೆ ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ತಂತಿ ಬೇಲಿ ಹಾಕಿಕೊಂಡಿದ್ದರು. ಇದನ್ನು ಪ್ರಶ್ನೆ ಮಾಡಿದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಂಬಲಿಗರಿಂದ ಧಮ್ಕಿ ಹಾಕಿಸಿದ್ದರು. ಜಮೀನು ವ್ಯಾಜ್ಯ ಹಿನ್ನೆಲೆಯಲ್ಲಿ ಮಹಿಳೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಹಿಳೆ ನೀಡಿರುವ ದೂರಿನ ಅನ್ವಯ ಅಂಜುಬಾಸ್, ಮುರಳಿ, ಸುರೇಶ್ ಸೇರಿ 4 ಜನರ ವಿರುದ್ಧ ಎಫ್ಐಆರ್ ಹಾಕಲಾಗಿದ್ದು, ಮಹಿಳೆಯನ್ನ ನಿಂದಿಸಿ ಹಲ್ಲೆ ಮಾಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 504, 143, 149, 323, 354 ಅಡಿ ಪ್ರಕರಣ ದಾಖಲಿಸಲಾಗಿದೆ.