ಬೆಂಗಳೂರು : ಸತತ 14ನೇ ದಿನವೂ ಸಾರಿಗೆ ನೌಕರರ ಮುಷ್ಕರ ಮುಂದುವರೆದ ಹಿನ್ನಲೆ ಇಂದು ಹೈಕೋರ್ಟ್ ಮುಷ್ಕರ ಕೈಬಿಟ್ಟು ಸೇವೆ ಆರಂಭಿಸಬೇಕು ಎಂದು ಸಾರಿಗೆ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ. ಮುಷ್ಕರ ಈ ಹಂತದಲ್ಲಿ ಸಮಂಜಸವಲ್ಲ, ಕೂಡಲೇ ಸಾರಿಗೆ ಸಂಸ್ಥೆಗಳು ಕಾರ್ಯಾರಂಭ ಮಾಡುವುದು ಸೂಕ್ತ. ಸಾರಿಗೆ ನೌಕರರ ಬೇಡಿಕೆಗಳಲ್ಲಿ ಕೆಲವನ್ನು ಈಡೇರಿಸಲಾಗಿದೆ. ನಿಮ್ಮ ಬೇಡಿಕೆ ಕಾಯ್ದಿರಿಸಿ ಕೂಡಲೇ ಸೇವೆ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ಅವರಿಂದ ಪೀಠ ಸೂಚನೆ ನೀಡಿ ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.










