ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ.

37
firstsuddi

ಬೆಂಗಳೂರು: ಹಿಂದೂಗಳ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ಆಚರಿಸಲಾಗುತ್ತಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.

ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಮ್ಮ ಶುಭಕೋರಿದ್ದಾರೆ.

ಇಂದು ರಾಜ್ಯದ ಎಲ್ಲೆಡೆ ಈದ್-ಉಲ್-ಫಿತರ್ ಹಬ್ಬ ಆಚರಿಸಲಾಗುತ್ತಿದೆ. ಬೆಂಗಳೂರಿನ ವಿವಿಧೆಡೆ ಮುಸ್ಲಿಮರಿಂದ ರಂಜಾನ್ ಆಚರಣೆ ನಡೆಯುತ್ತಿದ್ದು, ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಮುಸ್ಲಿಂ ಬಾಂಧವರು ನಮಾಜ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.