ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ – ಬಜರಂಗ ಮುನಿ ದಾಸ್ ಬಂಧನ…

57
firstsuddi

ಲಕ್ನೋ : ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಖೈರಾಬಾದ್ ನಲ್ಲಿರುವ ಮಹರ್ಷಿ ಶ್ರೀಲಕ್ಷ್ಮಣ್ ದಾಸ್ ಉದಾಸಿನ್ ಆಶ್ರಮದ ಮುಖ್ಯಸ್ಥ ಬಜರಂಗ ಮುನಿ ದಾಸ್ ನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಬಜರಂಗ ಮುನಿ ದಾಸ್ ಅವರು ಏಪ್ರಿಲ್ 2 ರಂದು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದರು. ಮುನಿ ಅವರು ಮಾಡಿದ್ದ ಭಾಷಣವು 2 ನಿಮಿಷಗಳ ವಿಡಿಯೊದಲ್ಲಿ ದಾಖಲಾಗಿತ್ತು. ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ನಡೆಸುವ ಬೆದರಿಕೆ ಹಾಕುವ ಮಾತುಗಳು ಅದರಲ್ಲಿ ಕೇಳಿಬಂದಿದ್ದವು. ಅದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಬಜರಂಗ ಮುನಿ ವಿವಾದಿತ ಹೇಳಿಕೆಗೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಮುನಿ ಬಂಧನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಒತ್ತಾಯದ ಮಾತುಗಳು ಕೇಳಿಬಂದಿದ್ದವು. ನಂತರ ಪೊಲೀಸರು ಬಜರಂಗ ಮುನಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ದ್ವೇಷ ಭಾಷಣ, ಅವಹೇಳನಕಾರಿ ಹೇಳಿಕೆಗಳು ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಾದ ಬೆನ್ನಲ್ಲೇ ಮುನಿ ದಾಸ್‌ ಅವರ ಕ್ಷಮೆಯಾಚನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ನನ್ನ ಹೇಳಿಕೆಯನ್ನು ತಪ್ಪು ರೀತಿಯಲ್ಲಿ ಪ್ರಸ್ತುತ ಪಡಿಸಲಾಗಿದೆ. ನಾನು ಆ ಬಗ್ಗೆ ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.