ಮೂಡಿಗೆರೆ : ಅನಾಥ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಮುಸ್ಲಿಂ ಬಾಂಧವರು…

313
firstsuddi

ಮೂಡಿಗೆರೆ : ಅನಾಥ ವ್ಯಕ್ತಿಯ ಅಂತ್ಯಸಂಸ್ಕಾರ ನೆರವೇರಿಸಿ ಮುಸ್ಲಿಂ ಬಾಂಧವರು ಮಾನವೀಯತೆ ಮೆರೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಈ ಬಗ್ಗೆ ವಿಚಾರ ಗೊತ್ತಿದ್ದರೂ ಯಾರು ಕೂಡ ತಲೆಕೆಡಿಸಿಕೊಂಡಿರಲಿಲ್ಲ. ಸಾವಿನ ಸುದ್ದಿ ತಿಳಿದ ಮೂಡಿಗೆರೆಯ ಸಾಮಾಜಿಕ ಸಕ್ರಿಯ ಸೇವ ಸಂಸ್ಥೆ ತಂಡದವರು ವ್ಯಕ್ತಿಯ ಶವವನ್ನು ಬಸ್ ನಿಲ್ದಾಣದಿಂದ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಕೂಡಲೇ ಶವವನ್ನು ಪಟ್ಟಣದ ಹೊರವಲಯದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಕೆಲ ವರ್ಷಗಳಿಂದ ಮೂಡಿಗೆರೆ ಸುತ್ತಮುತ್ತ ಈ ವ್ಯಕ್ತಿ ಓಡಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಮೃತ ವ್ಯಕ್ತಿ ಹಿಂದೂ ಧರ್ಮಕ್ಕೆ ಸೇರಿರುವ ಬಗ್ಗೆ ಮಾಹಿತಿ ಪಡೆದ ಮುಸ್ಲಿಂ ಬಾಂಧವರು, ಹಿಂದೂ ಸಂಪ್ರದಾಯದಂತೆ ಶವದ ಅಂತ್ಯಕ್ರಿಯೆ ನಡೆಸಿ ಮಾನವೀಯತೆ ಮೆರೆದಿದ್ದಾರೆ.