ಮೂಡಿಗೆರೆ : ತಾಲ್ಲೂಕಿನ ಗುತ್ತಿ ಗ್ರಾಮದಲ್ಲಿ ಆನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಶ್ರೀಮತಿ ಜಯ(42) ಅವರು ಮೃತಪಟ್ಟಿದ್ದು, ಗಾಯಗೊಂಡಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಉಜಿರೆ ಬಳಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದ್ದು, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










