ಮೂಡಿಗೆರೆ : ಐ.ಇ.ಸಿ ರೋಜ್‍ಗಾರ್ ಉದ್ಯೋಗ ಖಾತರಿ ವಾಹಿನಿಗೆ ಚಾಲನೆ…

465

ಮೂಡಿಗೆರೆ : ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಅವಕಾಶಗಳನ್ನು ಒದಗಿಸಲು ಐಇಸಿ ರೋಜ್‍ಗಾರ್ ವಾಹಿನಿಗೆ ಮೂಡಿಗೆರೆ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಚಾಲನೆ ನೀಡಲಾಯಿತು.

ಉದ್ಯೋಗ ಖಾತರಿ ಯೋಜನೆ ಮಾಹಿತಿ ನೀಡುವ ವಾಹಿನಿಗೆ ಚಾಲನೆ ನೀಡಿ ಮಾತನಾಡಿದ ತಾ.ಪಂ.ಅಧ್ಯಕ್ಷ ಕೆ.ಸಿ.ರತನ್ ಅವರು, 2019-20ನೇ ಸಾಲಿನಲ್ಲಿ ಪ್ರವಾಹ ಅಥವಾ ಬರಪೀಡಿತ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಮಹಾತ್ಮಗಾಂಧಿ ನರೇಗಾ ಯೊಜನೆ ಅಡಿಯಲ್ಲಿ ಉದ್ಯೋಗ ಅವಕಾಶಗಳನ್ನು ನೀಡಲು ಐಇಸಿ ರೋಜ್ ಗಾರ್ ವಾಹಿನಿ ಪ್ರಚಾರವನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ವತಿಯಿಂದ ಈ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಈ ಯೋಜನೆಯ ಅಂಶಗಳನ್ನು ತಿಳಿಸುವ ಸಲುವಾಗಿ ಉದ್ಯೋಗ ಖಾತರಿ ಪ್ರಚಾರ ವಾಹಿನಿಗೆ ಚಾಲನೆ ನೀಡಲಾಗಿದೆ. ಪ್ರತೀ ಗ್ರಾಮ ಪಂಚಾಯತಿಗಳಲ್ಲಿ ವಾಹಿನಿಯು ಕಾರ್ಯನಿರ್ವಹಿಸಲಿದ್ದು ಯೋಜನೆಯ ಕಾರ್ಯಕ್ರಮಗಳನ್ನು ತಿಳಿಸಿ ಹೇಳಲಾಗುವುದು. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸೇರಿದಂತೆ ತಾಲ್ಲೂಕು ಪಂಚಾಯತಿಯ ಹಲವು ಸದಸ್ಯರುಗಳು ಹಾಜರಿದ್ದರು.