ಮೂಡಿಗೆರೆ : ಚಾರ್ಮಾಡಿ ಘಾಟ್ ರಸ್ತೆಯ ಅಲೇಖಾನ್ ಬಳಿ ಗುಡ್ಡ ಕುಸಿತ…

265
firstsuddi

ಮೂಡಿಗೆರೆ : ತಾಲೂಕಿನಾದ್ಯಂತ ನಿನ್ನೆಯಿಂದ ಸುರಿಯುತ್ತಿರುವ ವರುಣನ ಅಬ್ಬರಕ್ಕೆ ಚಾರ್ಮಾಡಿ ಘಾಟ್ ನ ಅಲೇಖಾನ್‍ಗೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿತವಾಗಿದ್ದು, ಗುಡ್ಡದ ಮಣ್ಣು, ಬಂಡೆ ಕಲ್ಲುಗಳು ರಸ್ತೆಗೆ ಬಿದ್ದಿವೆ. ಸುಮಾರು 20 ಅಡಿ ಎತ್ತರವಿರುವ ಗುಡ್ಡ ಇದಾಗಿದ್ದು, ಗುಡ್ಡ ಕುಸಿತದಿಂದ ಸ್ಥಳೀಯರಲ್ಲಿ ಆತಂಕ ಎದುರಾಗಿದ್ದು, ಗುಡ್ಡ ಕುಸಿತವಾಗಿರುವ ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳು ಭೇಟಿ ನೀಡಿ ಮಣ್ಣನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.