ಮೂಡಿಗೆರೆ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪದೇ ಪದೇ ಗುಡ್ಡ ಹಾಗೂ ಭೂ ಕುಸಿತವಾಗುತ್ತಿರುವ ಹಿನ್ನೆಲೆ ಸೆಪ್ಟೆಂಬರ್ 13ರವರೆಗೆ ಚಾರ್ಮಾಡಿ ಘಾಟ್ ಸಂಪರ್ಕ ಬಂದ್ ಮಾಡಲಾಗಿದೆ. ಗುಡ್ಡ ಕುಸಿತದಿಂದ ರಸ್ತೆಗೆ ಬಿದ್ದಿರುವ ಮಣ್ಣನ್ನು ಜಿಲ್ಲಾಡಳಿತ ಒಂದು ವಾರದಿಂದ ಜೆಸಿಬಿಗಳ ಮೂಲಕ ಮಣ್ಣನ್ನು ತೆರವುಗೊಳಿಸುತ್ತಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಹೀಗಾಗಿ ಇನ್ನೂ ಒಂದು ತಿಂಗಳ ಕಾಲ ಚಾರ್ಮಾಡಿ ಘಾಟ್ ಮಾರ್ಗದ ಚಿಕ್ಕಮಗಳೂರು-ದಕ್ಷಿಣ ಕನ್ನಡ, ಧರ್ಮಸ್ಥಳ ಸಂಪರ್ಕ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.










