ಮೂಡಿಗೆರೆ : ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತವಾದ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಇದರಿಂದ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಸಂಚಾರವಿಲ್ಲದೆ ಪರದಾಡುವಂತಾಗಿತ್ತು. ಸಾರ್ವಜನಿಕರು ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮಿನಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದ ಹಿನ್ನೆಲೆ, ಮಂಗಳವಾರ ಅಧಿಕಾರಿಗಳ ತಂಡ ಕೊಟ್ಟಿಗೆಹಾರದಿಂದ ಚಾರ್ಮಾಡಿವರೆಗೂ ಮಿನಿ ಬಸ್‍ನಲ್ಲಿ ಪ್ರಾಯೋಗಿಕ ಸಂಚಾರ ನಡೆಸಿ ಪರೀಕ್ಷಿಸಿದ ಅಧಿಕಾರಿಗಳು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಿನಿ ಬಸ್ ಸಂಚಾರಕ್ಕೆ ಸುರಕ್ಷಿತವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಮೇಲಾಧಿಕಾರಿಗಳು ಮಿನಿ ಬಸ್ ಸಂಚಾರ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಾಯೋಗಿಕ ಸಂಚಾರಕ್ಕೆ ಆಗಮಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ತಿಳಿಸಿದರು.
Home ಸ್ಥಳಿಯ ಸುದ್ದಿ ಮೂಡಿಗೆರೆ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಿನಿ ಬಸ್ ಸಂಚಾರಕ್ಕೆ ಪ್ರಾಯೋಗಿಕವಾಗಿ ಪರೀಕ್ಷಿಸಿದ ಅಧಿಕಾರಿಗಳು…










