ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿ ಬಿದ್ದ ಟಂಟಂ ವಾಹನ…

269
firstsuddi

ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನವೊಂದು 50 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಾಡಿ ಘಾಟ್ ರಸ್ತೆಯ 5ನೇ ತಿರುವಿನಲ್ಲಿ ನಡೆದಿದೆ. ಟಂಟಂ ವಾಹನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಅಲ್ಯೂಮೀನಿಯಂ ತಂತಿಯನ್ನು ತುಂಬಿಕೊಂಡು ತೆರಳುತ್ತಿದ್ದ ವೇಳೆ ಭಾರಿ ಮಳೆಯಾಗುತ್ತಿದ್ದ ಕಾರಣ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಬಿದ್ದಿದ್ದು, ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟಾವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳು ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.