ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಲಾರಿ 60 ಅಡಿ ಕಂದಕಕ್ಕೆ ಉರುಳಿದ ಘಟನೆ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯ ಎರಡನೇ ತಿರುವಿನಲ್ಲಿ ನಡೆದಿದೆ. ನಿನ್ನೆ ರಾತ್ರಿ ಬಳ್ಳಾರಿಯಿಂದ ಧರ್ಮಸ್ಥಳದ ಕಡೆಗೆ ಕುರಿ ಗೊಬ್ಬರ ಸಾಗಿಸುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










