ಮೂಡಿಗೆರೆ : ಚೆಕ್ ಬೌನ್ಸ್ ಆರೋಪ- ಕಾಫಿ ಡೇ ಮಾಲೀಕ ಸಿದ್ದಾರ್ಥ್ ಪತ್ನಿ ಮಾಳವಿಕಾ ಅವರಿಗೆ ಜಾಮೀನು ರಹಿತ ಅರೆಸ್ಟ್ ವಾರೆಂಟ್…

385
firstsuddi

ಮೂಡಿಗೆರೆ : ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಅವರ ಪತ್ನಿ ಮಾಳವಿಕ ಅವರಿಗೆ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿಮಾಡಲಾಗಿದೆ. ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ನ ನಿರ್ದೇಶಕಿ ಮಾಳವಿಕಾ ಅವರು ಕಾಫಿ ಬೆಳೆಗಾರರಿಂದ ಕಾಫಿ ಖರೀದಿಸಿದ್ದು, ಎಬಿಸಿ ಕಂಪನಿಯಿಂದ ಬೆಳೆಗಾರರಿಗೆ ನೀಡಬೇಕಾದ 100 ಕೋಟಿಗೂ ಹೆಚ್ಚು ಹಣವನ್ನು ಉಳಿಸಿಕೊಂಡಿದ್ದಾರೆ. ಅಲ್ಲದೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ನಿಂದ ನೀಡಲಾಗಿದ್ದ ಚೆಕ್ ಬೌನ್ಸ್ ಆಗಿದೆ ಎಂದು ಆರೋಪಿಸಿ ಬೆಳೆಗಾರರಿಂದ ಮೂಡಿಗೆರೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಮಾಳವಿಕಾ ಅವರು ಸೇರಿದಂತೆ ಕಾಫಿ ಡೇ ಸಂಸ್ಥೆಯ 8 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ಸಮ್ಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಇವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ನ್ಯಾಯಾಲಯ ಮಾಳವಿಕಾ ಅವರು ಸೇರಿ ಒಟ್ಟು 8 ಮಂದಿಗೆ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ ಎನ್ನಲಾಗಿದೆ.