ಮೂಡಿಗೆರೆ : ಡಿಕೆಶಿ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ : ಆರ್. ಅಶೋಕ್.

551

ಮೂಡಿಗೆರೆ : ಡಿ.ಕೆ. ಶಿವಕುಮಾರ್ ಅವರ ಬಂಧನ ಹಿನ್ನೆಲೆ, ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು ಡಿ.ಕೆ. ಶಿವಕುಮಾರ್ ಅವರ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಾನೂನು ತನ್ನದೇ ಆದ ಕ್ರಮವನ್ನು ಕೈಗೊಂಡಿದೆ. ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಕಾಂಗ್ರೆಸ್ 60 ವರ್ಷ ಆಡಳಿತ ನಡೆಸಿದೆ. ಆ ಸಂದರ್ಭದಲ್ಲಿ ಬಹಳಷ್ಟು ಜನ ಜೈಲಿಗೆ ಹೋಗಿದ್ದಾರೆ. ಎಮರ್ಜೆನ್ಸಿ ವೇಳೆ ಬಿ.ಎಸ್. ಯಡಿಯೂರಪ್ಪ, ಅನಂತಕುಮಾರ್ ಹಾಗೂ ನಾನು ಕೂಡಾ ಜೈಲಿಗೆ ಹೋಗಿದ್ದೇವೆ. ಈ ಪ್ರಕರಣವನ್ನು ಬಿಜೆಪಿಗೆ ತಳಕು ಹಾಕುವ ಕೆಲಸ ಮಾಡಬೇಡಿ. ನಿಮ್ಮ ತಪ್ಪನ್ನು ನಮ್ಮ ಮೇಲೆ ಹಾಕಬೇಡಿ ಎಂದರು.