ಮೂಡಿಗೆರೆ : ನೂರಾರು ಮನೆಗಳು ನೆಲಸಮವಾಗಿರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ.

341
firstsuddi

ಮೂಡಿಗೆರೆ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಾಲ್ಲೂಕಿನಲ್ಲಿ ಭಾರಿ ಮಳೆಯಿಂದ ಹಾನಿಯಾಗಿರುವ ಹಿರೇಬೈಲು, ಸಂಸೆ, ನೆಲ್ಲೆಬೀಡು, ಕಳಸ, ಸುಂಕಸಾಲೆ, ದುರ್ಗದಹಳ್ಳಿ, ಮಧುಗುಂಡಿ, ಚೆನ್ನಹಡ್ಲು ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲನ್ನು ಸ್ವೀಕರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಿಗೆರೆ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ನೂರಾರು ಮನೆಗಳು ನೆಲಸಮವಾಗಿರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಇಲ್ಲಿನ ಜನರು ತುಂಬಾ ಭಯದಲ್ಲಿದ್ದಾರೆ. ಅವರು ಮತ್ತೆ ತಮ್ಮ ಗ್ರಾಮಗಳಿಗೆ ಹಿಂದಿರುಗಿ ವಾಸ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ. ಪ್ರವಾಹದ ಎಲ್ಲಾ ಮಾಹಿತಿಯನ್ನು ಪಡೆದು ಸರ್ಕಾರಕ್ಕೆ ಸಲ್ಲಿಸುತ್ತೇನೆ. ಕಳೆದ ವರ್ಷ ಕೊಡಗಿನಲ್ಲಿ ಇದೇ ರೀತಿ ಪರಿಸ್ಥಿತಿ ಉಂಟಾಗಿತ್ತು. ಆಗ ನಮ್ಮ ಸರ್ಕಾರ ಅಲ್ಲಿನ ಎಲ್ಲಾ ಸಂತ್ರಸ್ತರಿಗೂ ಪುನರ್ ವಸತಿ ಕಲ್ಪಿಸಿತು. ಅದೇ ಕಾರ್ಯವನ್ನು ಈ ಸರ್ಕಾರ ಮಾಡಲಿ ಎಂದು ಹೇಳಿದ್ದು, ಈ ವೇಳೆ ಹೆಚ್.ಡಿ. ಕುಮಾರಸ್ವಾಮಿ ಅವರ ಜೊತೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಎಸ್.ಎಲ್ ಧರ್ಮೇಗೌಡ, ಮಾಜಿ ಸಚಿವ ಸಾ.ರಾ ಮಹೇಶ್ ಹಾಗೂ ಮಾಜಿ ಶಾಸಕ ಬಿ.ಬಿ. ನಿಂಗಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ಜೆಡಿಎಸ್ ಮುಖಂಡರಾದ ಭಾರತಿ, ಬಾಳೂರು ಆದರ್ಶ ಹಾಗೂ ಮಗ್ಗಲಮಕ್ಕಿ ರವಿ ಇದ್ದರು.