ಮೂಡಿಗೆರೆ : ಬಡವನದಿಣ್ಣೆ ನೀರುಗಂಡಿ ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ…

551
firstsuddi

ಕೊಟ್ಟಿಗೆಹಾರ : ಬಡವನದಿಣ್ಣೆಯ ನೀರುಗಂಡಿ ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಕಾರ್ತೀಕ ದೀಪೋತ್ಸವ ನಡೆಯಿತು. ದೀಪೋತ್ಸವ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ನೂರಾರು ದೀಪಗಳನ್ನು ಬೆಳಗಲಾಯಿತು. ದೇವಸ್ಥಾನದ ಮುಂಭಾಗದಲ್ಲಿ ಪುಷ್ಪಾಲಂಕಾರದಿಂದ ಸಿಂಗರಿಸಲಾಗಿತ್ತು. ಭಕ್ತಾಧಿಗಳು ಹಣ್ಣು ಕಾಯಿ ಅರ್ಪಿಸಿ ಪೂಜೆ ಸಲ್ಲಿಸಿದರು. ದೀಪೋತ್ಸವದ ಪ್ರಯುಕ್ತ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದವು. ನೀರುಗಂಡಿ ಶ್ರೀಚೌಡೇಶ್ವರಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಬಡವನದಿಣ್ಣೆ ಸುತ್ತಮುತ್ತಲ್ಲಾ ಭಕ್ತಾಧಿಗಳು ಇದ್ದರು.