ಮೂಡಿಗೆರೆ : ಬಣಕಲ್ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವ…

81
firstsuddi

ಕೊಟ್ಟಿಗೆಹಾರ : ಬಣಕಲ್ ಸುಭಾಷನಗರದ ಶ್ರೀದೇವಿ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಾರ್ತೀಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.

ದೀಪೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ನೂರಾರು ದೀಪಗಳನ್ನು ಬೆಳಗಿಸಲಾಯಿತು. ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದವು. ಬಣಕಲ್, ಕುವೆಂಪುನಗರ್, ಸುಭಾಷನಗರ, ಗುಡ್ಡಟ್ಟಿ ಮುಂತಾದ ಕಡೆಗಳಿಂದ ಭಕ್ತಾಧಿಗಳು ಆಗಮಿಸಿ ಹಣ್ಣು ಕಾಯಿ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು.