ಮೂಡಿಗೆರೆ : ಬಣಕಲ್ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಿಬ್ಬಂದಿ ನೇಮಕಕ್ಕೆ ಒತ್ತಾಯ…

224
firstsuddi

ಕೊಟ್ಟಿಗೆಹಾರ : ಬಣಕಲ್‍ ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಹಾಯಕಿ ಹಾಗೂ ಲ್ಯಾಬ್ ಟೆಕ್ನಿಷಿಯನ್ ಅವರನ್ನು ನೇಮಿಸಬೇಕು ಎಂದು ಬಜರಂಗದಳ ತಾಲ್ಲೂಕು ಸಂಚಾಲಕ ವಿನಯ್ ಶೆಟ್ಟಿ ಒತ್ತಾಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಓರ್ವ ವೈದ್ಯರು, ಓರ್ವ ಆರೋಗ್ಯ ಸಹಾಯಕಿ ಹಾಗೂ ಡಿ ದರ್ಜೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದು ಈ ಆರೋಗ್ಯ ಕೇಂದ್ರಕ್ಕೆ ಬಣಕಲ್ ಹೋಬಳಿಯ ನೂರಾರು ರೋಗಿಗಳು ಬರುವುದರಿಂದ ಮತೋರ್ವ ಆರೋಗ್ಯ ಸಹಾಯಕಿ ಹಾಗೂ ಲ್ಯಾಬ್ ಟೆಕ್ನಿಷಿಯನ್ ಅವರ ಅಗತ್ಯವಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ತ್ವರಿತವಾಗಿ ಆರೋಗ್ಯ ಸೇವೆ ನೀಡಲು ಅನುಕೂಲವಾಗುವಂತೆ ಆರೋಗ್ಯ ಸಹಾಯಕರು ಹಾಗೂ ಲ್ಯಾಬ್ ಟೆಕ್ನಿಷಿಯನ್ ಅವರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.