ಮೂಡಿಗೆರೆ : ಮಳೆಯಲ್ಲಿ ನಿಂತು ಬಸ್ ಗೆ ಕಾಯುತ್ತಿರುವ ವಿದ್ಯಾರ್ಥಿಗಳು ; ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ…

169
firstsuddi

ಕೊಟ್ಟಿಗೆಹಾರ : ಬೆಟ್ಟಗೆರೆ ಗ್ರಾಮದಲ್ಲಿ ಮಳೆಯಲ್ಲಿ ನೆನೆಯುತ್ತಲೆ ಬಸ್ಸಿಗಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಕಾಯುವಂತಾಗಿದ್ದು ಬಸ್ ತಂಗುದಾಣ ನಿರ್ಮಿಸಬೇಕೆಂದು ಬೆಟ್ಟಗೆರೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಜೆಡಿಎಸ್ ಮುಖಂಡ ಮಂಜುನಾಥ್ ಬೆಟ್ಟಗೆರೆ, ಬೆಟ್ಟಗೆರೆಯಲ್ಲಿ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಹಾಗೂ ಫ್ರೌಡಶಾಲೆ, ವಿದ್ಯಾರ್ಥಿ ನಿಲಯವಿದ್ದು ಈ ಭಾಗದಿಂದ ಪಟ್ಟಣಕ್ಕೆ ದಿನನಿತ್ಯ ವಿದ್ಯಾರ್ಥಿಗಳು ಸಾರ್ವಜನಿಕರು ಬಸ್ಸಿನಲ್ಲಿ ಸಂಚರಿಸುತ್ತಾರೆ. ಆದರೆ ಬಸ್ ತಂಗುದಾಣ ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ಮಳೆಯಲ್ಲಿ ನೆನೆಯುತ್ತಲ್ಲೆ ಬಸ್ಸಿಗಾಗಿ ಕಾಯುವಂತಾಗಿದ್ದು ಇದ್ದರಿಂದಾಗಿ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಹಿರಿಯರಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಒತ್ತಾಯಿಸಿದ್ದಾರೆ.