ಮೂಡಿಗೆರೆ : ಮಿನಿ ಬಸ್ ಸಂಚಾರಕ್ಕೆ ಚಾರ್ಮಾಡಿ ಘಾಟ್ ಮುಕ್ತ…

1577
firstsuddi

ಮೂಡಿಗೆರೆ : ಮಲೆನಾಡು ಭಾಗದಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ರಣಭೀಕರ ಮಳೆಗೆ ಚಾರ್ಮಾಡಿ ಘಾಟ್‍ನಲ್ಲಿ ಪದೇ ಪದೇ ಗುಡ್ಡ ಕುಸಿತ ಹಾಗೂ ಭೂಕುಸಿತವಾಗಿದ್ದ ಹಿನ್ನೆಲೆ, 5 ತಿಂಗಳಿಂದ ಚಾರ್ಮಾಡಿ ಘಾಟ್ ಸಂಚಾರ ಬಂದಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿ ಮಿನಿ ಬಸ್ ಸಂಚಾರ ಆರಂಭವಾಗಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ಕೆ.ಎಸ್.ಆರ್.ಟಿ.ಸಿ ಮಿನಿ ಬಸ್ ಸೇರಿದಂತೆ ಲಘು ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ.