ಮೂಡಿಗೆರೆ : ಮಿನಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ-ಪ್ರಯಾಣಿಕರು ಪಾರು…

259
firstsuddi

ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಸರ್ಕಾರಿ ಮಿನಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಎರಡು ವಾಹನದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರಿನಿಂದ ಧರ್ಮಸ್ಥಳ ಕಡೆಗೆ ಸಾಗುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದ ಸರ್ಕಾರಿ ಮಿನಿ ಬಸ್ಸಿನ ನಡುವೆ ಮಲಯ ಮಾರುತ ಸಮೀಪ ಡಿಕ್ಕಿ ಸಂಭವಿಸಿದೆ. ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.