ಮೂಡಿಗೆರೆ: ಎಲೆಕ್ಟ್ರಿಕ್ ಕಾಂಟ್ರಾಕ್ಟರ್ ಒಬ್ಬರಿಂದ 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮೆಸ್ಕಾಂ ಇಲಾಖೆ ಜೆ.ಇ (ಉಪ ವಿಭಾಗದ ಕಿರಿಯ ಇಂಜಿನಿಯರ್) ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ (ಜೆ ಇ) ಕಿರಿಯ ಇಂಜಿನಿಯರ್ ಮಂಜುನಾಥ್ ಅವರು ಗುತ್ತಿಗೆದಾರ ಉಮೇಶ್ ಹಾಗೂ ಸತೀಶ್ ಎಂಬುವರ ಬಳಿ 15000 ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿ ಅನಿಲ್ ರಾಥೋಡ್ ಅವರ ತಂಡ ದಾಳಿ ನಡೆಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.










