ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹೂವಪ್ಪಗೌಡ ಎಂಬುವವರಿಂದ ಎಂ.ಪಿ.ಕುಮಾರಸ್ವಾಮಿ 1.35 ಕೋಟಿ ರೂ. ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಕುಮಾರಸ್ವಾಮಿ 8 ಚೆಕ್ ನೀಡಿದ್ದರು. ಆದರೆ ಈ ಎಲ್ಲಾ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಸಾಲ ಮರುಪಾವತಿ ಮಾಡದಿದ್ದಲ್ಲಿ 8 ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ಪ್ರಕಟಿಸಿದ್ದಾರೆ.










