ಮೂಡಿಗೆರೆ : ಸಡಗರ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ…

244
firstsuddi

ಮೂಡಿಗೆರೆ : ತಾಲ್ಲೂಕಿನ ಸುತ್ತಮುತ್ತಾ ವರಮಹಾಲಕ್ಷ್ಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಲಕ್ಷ್ಮೀ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಮುಂಜಾನೆ ಮನೆಯನ್ನು ಶುಚಿಗೊಳಿಸಿ ರಂಗೋಲಿ, ತಳಿರು ತೋರಣಗಳಿಂದ ಅಲಂಕರಿಸಿ ಶುಭ್ರವಾದ ಬಟ್ಟೆಯನ್ನು ತೊಟ್ಟು ಪೂಜೆ ನೆರವೇರಿಸಲಾಯಿತು. ಒಡವೆ, ವಸ್ತ್ರ, ಹಣವನ್ನು ಇಟ್ಟು ಪೂಜಿಸಲಾಯಿತು.
ಮೂಡಿಗೆರೆ ಪಟ್ಟಣ ಸೇರಿದಂತೆ ಬಣಕಲ್, ಕೊಟ್ಟಿಗೆಹಾರ, ಕಳಸ ಸುತ್ತಮುತ್ತಾ ಭಕ್ತಾಧಿಗಳು ದೇವಸ್ಥಾನಗಳಿಗೆ ಬೇಟಿ ನೀಡಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.