ಮೂಡಿಗೆರೆ :ಹೊರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸರಣಿ ಅಪಘಾತ – ಬೈಕ್ ಸವಾರ ಗಂಭೀರವಾಗಿ ಗಾಯ.

52
ಮೂಡಿಗೆರೆ: ತಾಲ್ಲೂಕಿನ ಹೊರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ  ಇಂದು ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಮೊದಲು ಪಿಕಪ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಆ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನು ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.