ಮೂರು ವರ್ಷದ ಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ…

84
firstsuddi

ನವದೆಹಲಿ : ಮೂರು ವರ್ಷದ ಮಗುವಿನ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನವದೆಹಲಿಯ ಫತೇಪುರ್ ಬೆರಿಯಲ್ಲಿ ನಡೆದಿದೆ.

ಮನೆಯಲ್ಲಿ ಮಗು ಕಾಣದಿದ್ದಾಗ ಪೋಷಕರು ಅಕ್ಕಪಕ್ಕದ ಮನೆಯವರಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಮಗು ಇಬ್ಬರು ಯುವಕರೊಂದಿಗೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೋಷಕರು ಸ್ಥಳಕ್ಕೆ ತೆರಳಿ ನೋಡಿದಾಗ ಮಗು ಅಳುತ್ತಾ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಕೂಡಲೇ ಮಗುವನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿ ಶಕ್ತಿಮಾನ್ ಸಿಂಗ್ (22) ಮತ್ತು ರಾಮ್ನಿವಾಸ್ ಪಣಿಕಾ (27) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರೂ ವಿವಾಹಿತರಾಗಿದ್ದು, ಸ್ಥಳೀಯ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.