ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

321
firstsuddi

ಜಮ್ಮು ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಇಂದು ಬೆಳಿಗ್ಗೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಉಗ್ರರು ಇಂದು ಬೆಳಿಗ್ಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಿ ಪರಾರಿಯಾಗಿದ್ದರು. ಸೈನಿಕರು ನಿರಂತರ ಕಾರ್ಯಾಚರಣೆ ನಡೆಸಿ ಉಗ್ರರು ಮನೆಯೊಂದರಲ್ಲಿ ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದು ಮನೆಯನ್ನು ಸುತ್ತುವರೆದು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಇನ್ನು ಮೂವರು ಉಗ್ರರಿಗೆ ಎಚ್ಚರಿಕೆ ನೀಡಿ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.