ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ…

65
firstsuddi

ಬೆಂಗಳೂರು : ರಾಜ್ಯ ಸರ್ಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರನ್ನು ತರಬೇತಿ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ. ತರಬೇತಿ ವಿಭಾಗದ ಎಡಿಜಿಪಿಯಾಗಿದ್ದ ಹರಿಶೇಖರನ್ ಪಿ. ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗೆ ಹಾಗೂ ಹುದ್ದೆಯ ನಿರೀಕ್ಷೆಯಲ್ಲಿದ್ದ ಎಡಿಜಿಪಿ ಅರುಣ್ ಚಕ್ರವರ್ತಿ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.