ಮೂವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು…

141
firstsuddi

ಛತ್ತೀಸ್‍ಗಢ : ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಮೂವರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಛತ್ತೀಸ್‍ಗಢದ ಕಂಕರ್ ಜಿಲ್ಲೆಯ ರಾವ್ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಸ್ರೊಂಡಾ ಬಳಿ ನಕ್ಸಲರು ಇರುವ ಮಾಹಿತಿಯನ್ನು ತಿಳಿದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಮೂವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಯೋಧರೊಬ್ಬರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.