ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ…

89
firstsuddi

ಶ್ರೀನಗರ : ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ನಲ್ಲಿ ಇಂದು ಬೆಳಗಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಜೈಷ್-ಇ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಸದೆಬಡಿಯಲಾಗಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಅವಂತಿಪುರದ ಪಂಪೂರ್ ನಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೆಡೆಮುರಿ ಕಟ್ಟಿದ್ದರು. ಸದ್ಯ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ರಕ್ಷಣಾ ಪಡೆಗಳು ವಶಪಡಿಸಿಕೊಂಡಿವೆ.