ಮೂವರು ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ…

572
firstsuddi

ಜಮ್ಮು ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಇಂದು ಬೆಳಿಗ್ಗೆಯಿಂದ ಗುಂಡಿನ ಚಕಮಕಿ ನಡೆದಿದ್ದು, ಮೂವರು ಉಗ್ರರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಉಗ್ರರು ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ವಜಲ್ಪೋರದಲ್ಲಿರುವ ಮನೆಯೊಂದರಲ್ಲಿ ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದ ಸೈನಿಕರು ಮನೆಯನ್ನು ಸುತ್ತುವರೆದಿದ್ದಾರೆ. ಈ ವೇಳೆ ಉಗ್ರರು ಸೈನಿಕರನ್ನು ಗುರಿಯಾಗಸಿಕೊಂಡು ಗುಂಡಿನ ಚಕಮಕಿ ನಡೆಸಿದ್ದು, ಇದಕ್ಕೆ ಪ್ರತಿದಾಳಿ ನಡೆಸಿದ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಮೂವರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.