ಮೃತ ಹಸುವಿನ ಮರಣೋತ್ತರ ಪರೀಕ್ಷೆಗೆ ಲಂಚ ಕೇಳಿ ಲೋಕಾಯುಕ್ತ ಬಲೆಗೆ ಬಿದ್ದ ಪಶು ವೈದ್ಯಾಧಿಕಾರಿ.

58
firstsuddi

ಚಿತ್ರದುರ್ಗ: ಮೃತ ಹಸುವಿನ ಮರಣೋತ್ತರ ಪರೀಕ್ಷೆಗೆ ಲಂಚವನ್ನು ಕೇಳಿದ ಪಶು ವೈದ್ಯಾಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ

ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಚಿಕ್ಕಜಾಜೂರು ಗ್ರಾಮದಲ್ಲಿ ಮೃತ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್. ಸ್ವಾಮಿಯಿಂದ ಪಶು ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.