ಮೆಕ್ಸಿಕೋದ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರಿನ ಕಾನ್ಸ್‌ಟೇಬಲ್ ಆಯ್ಕೆ…

54
firstsuddi

ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್ ಹೆಚ್.ಎಂ ಲೋಕೇಶ್, ಮೆಕ್ಸಿಕೋದ ಭಾರತೀಯ ರಾಯಭಾರ ಕಚೇರಿಯ ಭದ್ರತಾ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ.

ಸಂವಹನ, ಇಂಗ್ಲೀಷ್ ಹಾಗೂ ಕಂಪ್ಯೂಟರ್ ಕೌಶಲ್ಯ ಹೊಂದಿದ್ದ ಅವರು ಕೊರೊನಾ ಸಮಯದಲ್ಲಿ ನಾಗರಿಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಜನರ ಸಂದೇಹಗಳಿಗೆ ಉತ್ತರಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದರು.

ಪೊಲೀಸ್ ಆಯುಕ್ತರಾದ ಪ್ರವೀಣ್ ಸೂದ್, ಮೇಘರಿಕ್, ಸುನೀಲ್ ಕುಮಾರ್, ಭಾಸ್ಕರ್ ರಾವ್, ಕಮಲ್ ಪಂತ್ ಮತ್ತು ಪ್ರತಾಪ್ ರೆಡ್ಡಿ ಅವಧಿಯಲ್ಲಿ ಕೆಲಸ ನಿರ್ವಹಿಸಿದ್ದರು. ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡಿ, ಲೋಕೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.