ಮೆಟ್ರೋ ಕೋಚ್‌ನ ನೆಲದ ಮೇಲೆ ಕುಳಿತು ಲಿಪ್ ಲಾಕ್ ಮಾಡಿದ ಪ್ರೇಮಿಗಳು…

55
firstsuddi

ನವದೆಹಲಿ: ಪ್ರೇಮಿಗಳಿಬ್ಬರು ಮೆಟ್ರೋ ಕೋಚ್‌ನ ನೆಲದ ಮೇಲೆ ಕುಳಿತು ಲಿಪ್ ಲಾಕ್ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೀಡಿಯೊದಲ್ಲಿ ಯುವತಿ ವ್ಯಕ್ತಿಯೊಬ್ಬನ ಮಡಿಲಲ್ಲಿ ಕುಳಿತು ಪರಸ್ಪರ ತುಟಿಗೆ ಚುಂಬಿಸುತ್ತಿರುವುದು ಕಂಡುಬಂದಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮೂಲಗಳ ಪ್ರಕಾರ, ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೊತೆಗೆ ಯುವತಿ ಹಾಗೂ ವೀಡಿಯೊದಲ್ಲಿನ ಯುವಕ ಗಂಡ-ಹೆಂಡತಿ ಎಂದು ಹೇಳಲಾಗುತ್ತಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಮೆಟ್ರೋ ರೈಲು ನಿಗಮ, ತನ್ನ ಪ್ರಯಾಣಿಕರಿಗೆ ಇಂತಹ ಅಶ್ಲೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಮನವಿ ಮಾಡಿದೆ.

ಇಂತಹ ಘಟನೆಗಳನ್ನು “ಸಮೀಪದ ಲಭ್ಯವಿರುವ ಮೆಟ್ರೋ ಸಿಬ್ಬಂದಿ ಅಥವಾ ಸಿಐಎಸ್ಎಫ್ ಸಿಬ್ಬಂದಿಗೆ ತಕ್ಷಣ ತಿಳಿಸಬೇಕು. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬಹುದು” ಎಂದು ಮೆಟ್ರೋ ಅಧಿಕಾರಿಗಳು ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.