ಬೆಂಗಳೂರು : ನಾಗವಾರದಲ್ಲಿ ನಿನ್ನೆ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಬಿಎಂಆರ್‌ಸಿಎಲ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಗೆ ಮನವಿ ಮಾಡಿಕೊಂಡಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಮೆಟ್ರೋ ಡೆಪ್ಯುಟಿ ಚೀಫ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್, ಸೆಕ್ಷನ್ ಎಂಜಿನಿಯರ್ ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ಅಂಜುಂ ಫರ್ವೇಜ್ ತಿಳಿಸಿದ್ದಾರೆ.
ನಿನ್ನೆ ದುರಂತದ ಬಳಿಕ ಮೆಟ್ರೋ ಚೀಫ್ ಇಂಜಿನಿಯರ್ ರಿಂದ ಎನ್ ಸಿಸಿ ಕಂಪನಿಗೆ ನೋಟಿಸ್ ನೀಡಲಾಗಿದೆ. ಇಂದು ಮೆಟ್ರೋ ನಿರ್ದೇಶಕರಿಂದ ಎನ್ ಸಿಸಿ ಆಡಳಿತ ವಿಭಾಗಕ್ಕೆ ಮತ್ತೊಂದು ನೋಟಿಸ್ ಬಂದಿದೆ. ಮೂರು ದಿನಗಳ ಒಳಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ.
ಎನ್ ಸಿಸಿ ಕಂಪನಿಯ ಮೇಲೆ ಈಗಾಗಲೇ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಪೋಲಿಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಅಂಜುಂ ಫರ್ವೇಜ್ ಹೇಳಿದ್ದಾರೆ.










