ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ – ಆರೋಪಿ ಅರೆಸ್ಟ್…

50
firstsuddi

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಸಂಜಯ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತೆಲಂಗಾಣ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದೆ. ನೀಟ್ ಪರೀಕ್ಷೆಯ ಫಲಿತಾಂಶದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಗಾಳ ಹಾಕುತ್ತಿದ್ದ. ಪರೀಕ್ಷೆಯಲ್ಲಿ ಕಡಿಮೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನೇ ಆರೋಪಿ ಟಾರ್ಗೆಟ್ ಮಾಡುತ್ತಿದ್ದ. ಒಳ್ಳೆಯ ಕಾಲೇಜ್‍ನಲ್ಲಿ ಸೀಟ್ ಕೊಡಿಸುವುದಾಗಿ ಲಕ್ಷ ಲಕ್ಷ ಹಣ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರಂಭಿಕ ತನಿಖೆಯಲ್ಲಿ ಇದೇ ಮಾದರಿಯಲ್ಲಿ 20ಕ್ಕೂ ಅಧಿಕ ಮಂದಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಹಣ ಕಳೆದುಕೊಂಡವರಲ್ಲಿ ಕೆಲವರು ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೈದರಾಬಾದ್‍ನಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ, ಅಭ್ಯರ್ಥಿಗಳಿಂದ ಪಡೆದಿದ್ದ 47.80 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.