ಮೇಕೆದಾಟು ಪಾದೆಯಾತ್ರೆ ಕೈಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಪತ್ರ ಬರೆದ ಸಿಎಂ.

55
firstsuddi

ಬೆಂಗಳೂರು : ಮೇಕೆದಾಟು ಪಾದಯಾತ್ರೆಯನ್ನು ಕೈಬಿಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ?

ನಾನು ಮೇಕೆದಾಟು ಯೋಜನೆ ಬಗ್ಗೆ ನಿಮ್ಮೆಲ್ಲರ ವಿಶ್ವಾಸದೊಂದಿಗೆ ಅನುಷ್ಠಾನಕ್ಕಾಗಿ ಬೇಕಾಗಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧನಿದ್ದೇನೆ.

ಕೊರೊನಾ ಮಹಾಮಾರಿಯ 3ನೇ ಅಲೆ ತೀವ್ರವಾಗಿ ಅಪ್ಪಳಿಸಿದ ಹಿನ್ನೆಲೆಯಲ್ಲಿ ಜನಜೀವನ ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಸರಿಯಿರುವುದಿಲ್ಲ. ಈಗಾಗಲೇ ಮಾನ್ಯ ಉಚ್ಛನ್ಯಾಯಾಲಯ ಕೂಡ ಇದರ ಬಗ್ಗೆ ತೀವ್ರವಾದಂತಹ ಅಭಿಪ್ರಾಯ ನೀಡಿದೆ ಮತ್ತು ಇದು ಜನಾಭಿಪ್ರಾಯ ಕೂಡ ಆಗಿದೆ. ಹೀಗಾಗಿ ಪಾದಯಾತ್ರೆಯನ್ನು ಮುಂದುವರೆಸುವುದನ್ನು ಕೈಬಿಟ್ಟು ನಾವೆಲ್ಲ ಈಗ ಕೊರೊನಾವನ್ನು ಎದುರಿಸಿ ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂಬ ಮನವಿಯನ್ನು ತಮ್ಮಲ್ಲಿ ಮಾಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.