ಮೇಕೆದಾಟು ಯೋಜನೆ : ತಮಿಳುನಾಡು ವಿರುದ್ಧ ಪರಿಷತ್​ನಲ್ಲಿ ಖಂಡನಾ ನಿರ್ಣಯ…

61
firstsuddi

ಬೆಂಗಳೂರು : ವಿಧಾನ ಪರಿಷತ್‍ನಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ದ ನಿರ್ಣಯಕ್ಕೆ ಖಂಡನಾ ನಿರ್ಣಯ ಮಂಡಿಸಲಾಯಿತು.

ಇತ್ತೀಚೆಗೆ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆ ಖಂಡನಾ ನಿರ್ಣಯ ಕೈಗೊಂಡಿತ್ತು. ಈ ನಿರ್ಣಯ ವಿರೋಧಿಸಿ ರಾಜ್ಯ ಸರ್ಕಾರ ಕೈಗೊಂಡ ಖಂಡನಾ ನಿರ್ಣಯಕ್ಕೆ ನದಿ ಜೋಡಣೆಯ ಡಿಪಿಆರ್ ಅನ್ನು ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸಬಾರದು ಎಂಬ ತಿದ್ದುಪಡಿಯೊಂದಿಗೆ ವಿಧಾನಸಭೆ ಅಂಗೀಕರಿಸಿದ್ದ ನಿರ್ಣಯವನ್ನು ವಿಧಾನ ಪರಿಷತ್ ಸಹ ಸರ್ವಾನುಮತದಿಂದ ಅಂಗೀಕರಿಸಿದೆ.

ಕಾನೂನು ಸಚಿವ ಮಾಧುಸ್ವಾಮಿ ಅವರು ಈ ನಿರ್ಣಯ ಮಂಡಿಸಿದರು. ಸರ್ಕಾರ ಖಂಡನಾ ನಿರ್ಣಯವನ್ನ ಕಾಂಗ್ರೆಸ್ ಸ್ವಾಗತಿಸಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ಇದೀಗ ಸರ್ಕಾರದ ನಿರ್ಣಯವನ್ನು ಸರ್ವಾನುಮತದಿಂದ ಕಾಂಗ್ರೆಸ್ ಒಪ್ಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ನಿನ್ನೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ ಆಗಿತ್ತು.