ಶ್ರೀನಗರ : ಮೇಘಸ್ಫೋಟದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು ಮತ್ತೆ ಶುರುವಾಗಿದೆ. ಪೆಹಲ್ಗಾಮ್ ಬೇಸ್ ಮಾರ್ಗವಾಗಿ ತೆರಳಲು ಅವಕಾಶ ನೀಡಲಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಈಗ ತೀರ್ಥಯಾತ್ರೆ ಪುನಾರಂಭವಾಗಿದೆ.
ಮುಂಜಾನೆ 5 ಗಂಟೆಗೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರಾರ್ಥಿಗಳು ಹೊರಟಿದ್ದಾರೆ. ನಿನ್ನೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇತ್ತ ಅಮರನಾಥ ಗುಹೆಯ ಬಳಿ ಮೇಘಸ್ಫೋಟ ಉಂಟಾಗಿ 16 ಜನರು ಮೃತಪಟ್ಟು, ಸುಮಾರು 40 ಮಂದಿ ನಾಪತ್ತೆಯಾಗಿದ್ದರು. ಅಮರನಾಥ ಕ್ಷೇತ್ರದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಆದರೆ ಬದುಕುಳಿಯುವ ಸಾಧ್ಯತೆ ಕ್ಷೀಣವಾಗಿದೆ ಎನ್ನಲಾಗಿದೆ.










