ಮೇ 17 ರೊಳಗೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ಪೂರ್ಣಗೊಳಿಸಿ : ಕೋರ್ಟ್ ಸೂಚನೆ…

43
firstsuddi

ಲಕ್ನೋ : ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಮೇ 17ರ ಒಳಗಡೆ ಪೂರ್ಣಗೊಳಿಸುವಂತೆ ಕೋರ್ಟ್ ಆದೇಶಿಸಿದೆ.

ಜ್ಞಾನವಾಪಿ ಮಸೀದಿ ಒಳಗೆ ಸಮೀಕ್ಷೆ ನಡೆಸಲು ಆದೇಶ ನೀಡಲು ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ವಾರಾಣಸಿ ಕೋರ್ಟ್ ಮಸೀದಿಯ ಸರ್ವೇ ಕಾರ್ಯವನ್ನು ಮುಂದುವರಿಸಿ, ಮೇ 17 ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಸರ್ವೇ ಕಾರ್ಯಕ್ಕಾಗಿ ಹೆಚ್ಚುವರಿ ಕಮಿಷನರ್ ರನ್ನು ನೇಮಕ ಮಾಡಿ ಆದೇಶಿಸಿದೆ.

ಏನಿದು ಪ್ರಕರಣ?
ವಾರಣಾಸಿಯ ಜ್ಞಾನವಾಪಿ ಮಸೀದಿ ಹೊರ ಗೋಡೆಗೆ ತಾಗಿಕೊಂಡೇ ಇರುವ ಹಿಂದೂ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಐದು ಹಿಂದೂ ಮಹಿಳೆಯರು 2021ರ ಏಪ್ರಿಲ್ 21ರಂದು ವಾರಣಾಸಿಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ವಿಚಾರವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮೇ 10 ರೊಳಗೆ ಕಾಶಿ ವಿಶ್ವನಾಥ ಮಂದಿರ- ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ವೀಡಿಯೋ ಚಿತ್ರೀಕರಣ ನಡೆಸುವಂತೆ ಏಪ್ರಿಲ್ 26ರಂದು ಆದೇಶಿಸಿತ್ತು. ಆದರೆ, ವೀಡಿಯೋ ಚಿತ್ರೀಕರಣ ಮತ್ತು ಸಮೀಕ್ಷೆ ನಡೆಸಲು ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಅವಕಾಶ ನೀಡಿರಲಿಲ್ಲ. ಹೀಗಾಗಿ ಸರ್ವೇ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಮೇ 17ರ ಒಳಗಡೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ.