ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕು ಗೆಲ್ಲಿಸಬೇಡಿ : ಡಿ.ಕೆ. ಶಿವಕುಮಾರ್.

188
firstsuddi

ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಯಾವುದೇ ಕಾರಣಕ್ಕು ಗೆಲ್ಲಿಸಬೇಡಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಬಡಾವಣೆಯಲ್ಲಿ ಚುನಾವಣಾ ಪ್ರಚಾರದ ಬಳಿಕ ಮಾತನಾಡಿದ ಅವರು, ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಒಡೆಯಲು 7ಬಾರಿ ಪ್ರಯತ್ನಿಸಲಾಗಿತ್ತು. ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿರುವ ಬಗ್ಗೆ ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ತಿಳಿಸಿದ್ದಾರೆ. ಹಣ ಹಾಗೂ ಅಧಿಕಾರದ ಆಸೆಯಿಂದ ಮೈತ್ರಿ ಸರ್ಕಾರವನ್ನು ಪತನ ಮಾಡಿ ಉಪಚುನಾವಣೆಗೆ ಕಾರಣರಾಗಿರುವ ಅನರ್ಹರನ್ನು ಯಾವುದೇ ಕಾರಣಕ್ಕೂ ಗೆಲ್ಲಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಆಧಾರ ಸ್ತಂಭ. ಈ ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ ಒಳ್ಳೆಯ ವ್ಯಕ್ತಿಯಾಗಿರುವ ಎಂ.ಶಿವರಾಜು ಅವರನ್ನು ಕಣಕ್ಕಿಳಿಸಿದ್ದೇವೆ. ಇವರನ್ನು ಗೆಲ್ಲಿಸುವ ಮೂಲಕ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಮತದಾರರಿಗೆ ಹೆಚ್ಚರಿಕೆ ನೀಡಿದರು.