ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ಪತ್ತೆ!

68
firstsuddi

ಮೈಸೂರು: ನಗರದಲ್ಲಿ ಮತ್ತೊಂದು ಕೊರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

ಮೈಸೂರು ವಿಶ್ವವಿದ್ಯಾಲಯದ ವಿದೇಶಿ ವಿದ್ಯಾರ್ಥಿನಿಗೆ ಓಮಿಕ್ರಾನ್ ದೃಢಪಟ್ಟಿದೆ. ಡಿಸೆಂಬರ್ 20 ರಂದು ತಾಂಜೇನಿಯಾ ದೇಶದಿಂದ ಆಗಮಿಸಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಓಮಿಕ್ರಾನ್ ಸೋಂಕು ಎಂದು ದೃಢವಾಗಿದೆ.

ಸದ್ಯ ಜಿಲ್ಲಾಡಳಿತ ಸೋಂಕಿತೆಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತೆಯ ಸಂಪರ್ಕಿತರನ್ನ ಪತ್ತೆ ಹಚ್ಚುತ್ತಿದೆ. ಈ ಮೂಲಕ, ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 39 ಕ್ಕೆ ಏರಿಕೆ ಕಂಡಿದೆ.