ಮೈಸೂರು : ಕೊರೊನಾ ರೂಪಾಂತರಿ ಓಮಿಕ್ರಾನ್ ರಾಜ್ಯದೆಲ್ಲೆಡೆ ಅಬ್ಬರ ಶುರುಮಾಡಿದೆ. ಜಿಲ್ಲೆಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.
ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಒಮಿಕ್ರಾನ್ ಸೋಂಕು ವಕ್ಕರಿಸಿದೆ. ಸೋಂಕಿತ ಬಾಲಕಿಗೆ ಯಾವುದೇ ಲಕ್ಷಣಗಳಿಲ್ಲ. ವೈದ್ಯರು ಪ್ರತ್ಯೇಕವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಾಥಮಿಕ, ದ್ವಿತೀಯ ಸೋಂಕಿತರ ಪತ್ತೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿಯನ್ನು ನೀಡಿದ್ದಾರೆ.










