ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಅಮಿತ್ ಶಾ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಆರಂಭಿಸಿದ್ದಾರೆ. ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಅಮಿತ್ ಶಾ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಮಿತ್ ಶಾ ಅವರಿಗೆ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ರಾಮದಾಸ್ ಸಾಥ್ ನೀಡಿದರು.










