ಮೈಸೂರು : ಕಾಡಾನೆ ದಾಳಿಗೆ ಮಹಿಳೆ ಸಾವು…

55
firstsuddi

ಮೈಸೂರು : ಆನೆ ದಾಳಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಚಿಕ್ಕಬೀಚನಹಳ್ಳಿ ಗ್ರಾಮದ ಚಿಕ್ಕಮ್ಮ, ಗಂಡ ಸಿದ್ದೇಗೌಡರ ಜೊತೆ ತಮ್ಮ ಜಮೀನಿನಲ್ಲಿ ಬೆಳೆದ ಹುರುಳಿ ಒಕ್ಕಲು ಮಾಡಲು ಕಣ ಮಾಡುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಂಪತಿಗಳ ಮೇಲೆ ದಾಳಿ ಮಾಡಿದೆ. ಚಿಕ್ಕಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಡ ಸಿದ್ದೇಗೌಡ ತಪ್ಪಿಸಿಕೊಂಡಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಇದೇ ಸಮಯದಲ್ಲಿ ಜಮೀನಿನಲ್ಲಿದ್ದ ರಂಜು ಹಾಗೂ ರವಿ ಎಂಬುವವರ ಮೇಲೂ ಆನೆ ದಾಳಿ ಮಾಡಿದೆ. ಗಾಯಾಳುಗಳನ್ನು ಮೈಸೂರಿನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಹಾಗೂ ರಂಜು ಅವರನ್ನು ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.