ಮೈಸೂರು: ಐಟಿ ಅಧಿಕಾರಿಗಳ ದಾಳಿ- ಗಿಡದಲ್ಲಿಟ್ಟಿದ್ದ 1 ಕೋಟಿ ರೂ ಜಪ್ತಿ…

74
firstsuddi

ಮೈಸೂರು: ನಗರದ ಕೆ. ಸುಬ್ರಹ್ಮಣ್ಯ ರೈ ಎಂಬುವವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮನೆಯಾಂಗಳದ ಗಿಡದಲ್ಲಿಟ್ಟಿದ್ದ 1 ಕೋಟಿ ರೂ. ನಗದನ್ನು ವಶ ಪಡಿಸಿಕೊಂಡಿದ್ದಾರೆ.

ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಸೋದರರಾಗಿದ್ದಾರೆ. ಮೈಸೂರಿನ ಸುಬ್ರಹ್ಮಣ್ಯ ರೈ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಸುಬ್ರಹ್ಮಣ್ಯ ರೈ ಅವರ ಮನೆಯ ಅಂಗಳದ ಮರದಲ್ಲಿ ಮಾವಿನ ಹಣ್ಣಿನ ಬಾಕ್ಸ್‌ನಲ್ಲಿ  ಬಚ್ಚಿಡಲಾಗಿದ್ದ 1 ಕೋಟಿ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.

ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಹೈವೋಲ್ಟೇಜ್ ಕ್ಷೇತ್ರವಾಗಿದೆ. ಬಿಜೆಪಿ ಹಾಗೂ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನಡುವೆ ಜಟಾಪಟಿಯಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಹೊಸ ಮುಖ ಅಶೋಕ್ ಕುಮಾರ್ ರೈಗೆ ಟಿಕೆಟ್ ನೀಡಿದೆ.