ಮೈಸೂರು ದಸರಾ-ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ…

121
firstsuddi

ಮೈಸೂರು : ಮಹಾಮಾರಿ ಕೊರೊನಾ ವೈರಸ್ ಭೀತಿ ಹಿನ್ನೆಲೆ, ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ತುಂಬಾ ಸರಳವಾಗಿ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ದಸರಾ ಹಬ್ಬದ ಪ್ರಮುಖ ಆಕರ್ಷಣೆ ಜಂಬೂಸವಾರಿಗೂ ಮುನ್ನ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಇರುವ ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಅದರಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ವಿಶ್ವವಿಖ್ಯಾತ ಜಂಬೂಸವಾರಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಬಳಿಕ ಚಾಮುಂಡೇಶ್ವರಿ ತಾಯಿಯ ಮೆರವಣಿಗೆ ಆರಂಭವಾಗುತ್ತದೆ.