ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅ.4ರಿಂದ 8ರವರೆಗೆ ಬೆಂಗಳೂರಿನಿಂದ ದೂರದ ಊರಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕೆಂಪೇಗೌಡ ಬಸ್ ನಿಲ್ದಾಣದಿಂದ 2500 ಹೆಚ್ಚುವರಿ ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್ ಕೆಂಪೆಗೌಡ ಬಸ್ ನಿಲ್ದಾಣದಿಂದ ಮಂಗಳೂರು, ಹುಬ್ಬಳ್ಳಿ, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಹ್ನಣ್ಯ, ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು, ಹಾಸನ, ದಾವಣಗೆರೆ ಹಾಗೂ ಬೆಂಗಳೂರು ಹಾಗೂ ಅಂತರ್ರಾಜ್ಯಕ್ಕೆ ತೆರಳುವ ಪ್ರಯಾಣಿಕರಿಗೆ ವಿಶೇಷ ಬಸ್ಗಳು ಸಂಚರಿಸಲಿದೆ ಬೆಂಗಳೂರಿನ ಮೈಸೂರು ರಸ್ತೆ ನಿಲ್ದಾಣದಿಂದ ಮೈಸೂರು ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು, ಶ್ರೀರಂಗಪಟ್ಟಣ, ನಂಜನಗೂಡು ಹಾಗೂ ವಿವಿಧೆಡೆ ಸಂಚರಿಸಲು 175 ವಿಶೇಷ ಬಸ್ ಸೇರಿದಂತೆ ಒಟ್ಟು 350 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.










