ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭಾರಿ ಅನಾಹುತವೊಂದು ತಪ್ಪಿದೆ.
ರಾಮನಗರ ಬೈಪಾಸ್ ನ ಸಂಘಬಸವನದೊಡ್ಡಿ ಬಳಿ ದಶಪಥ ಹೆದ್ದಾರಿ ಮೇಲ್ಸೇತುವೆವೊಂದರಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಕಾರು, ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿಪ್ಪರ್ ಮೇಲ್ಸೇತುವೆಗೆ ಒರಗಿ ನಿಂತಿದೆ.
ಸೇತುವೆ ಕೆಳಭಾಗದಲ್ಲಿ ಎಕ್ಸ್ ಪ್ರೆಸ್ ಹೈವೇ ಇರುವುದರಿಂದ ಹೆಚ್ಚಿನ ವಾಹನ ಸಂಚರಿಸುತ್ತಿತ್ತು. ಏನಾದರು ಟಿಪ್ಪರ್ ಸೇತುವೆಯಿಂದ ಕೆಳಗೆ ಉರುಳಿದ್ದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದಂತಾಗಿದೆ.










